Karnataka Nataka Academy
ಕರ್ನಾಟಕ ನಾಟಕ ಅಕಾಡೆಮಿ ನಡೆದು ಬಂದ ದಾರಿ
ಸಾಂಸ್ಕೃತಿಕ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಹಿತ್ಯಕ ಪರಂಪರೆಗಳನ್ನು ಉಳಿಸಿ ಬೆಳೆಸುವಲ್ಲಿ ಸರ್ಕಾರದ ಪಾತ್ರ ಗುರುತರವಾದುದು. ಕಲೆ ಸಂಸ್ಕೃತಿಗಳನ್ನು ಕಾಪಾಡಲು, ಪ್ರದರ್ಶನ ಕಲೆಗಳನ್ನು ಅಭಿವೃದ್ಧಿ ಪಡಿಸಲು ಸದಾ ಸಿದ್ಧರಾಗಿರುವ ರಾಜ್ಯ ಸರ್ಕಾರ ಪ್ರತಿಯೊಂದು ಕಲಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಚಿಂತನೆ ನಡೆಸಿ ರೂಪಿಸಿದ ಯೋಜನೆಯಲ್ಲಿ ಅಕಾಡೆಮಿಗಳ ಸ್ಥಾಪನೆಯು ಒಂದು.ಕರ್ನಾಟಕ ನಾಟಕ ಅಕಾಡೆಮಿಯ ಅಂದಿನ ಮೈಸೂರು ಸರ್ಕಾರದ ಆಡಳಿತದಡಿ 1959ರಲ್ಲಿ ಮೈಸೂರು ರಾಜ್ಯ ಸಂಗೀತ ನಾಟಕ ಅಕಾಡೆಮಿ ಎಂಬ ಹೆಸರಿನಲ್ಲಿ ಸ್ಥಾಪಿತವಾಯಿತು. ನಂತರ 1978ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಎಂಬ ಹೆಸರಿನಲ್ಲಿ ಸ್ವತಂತ್ರ ಅಕಾಡೆಮಿಯಾಗಿ ರೂಪುಗೊಂಡು ನಾಟಕ ಕ್ಷೇತ್ರಕ್ಕೆ ವಿಶಿಷ್ಟ ಆಯಾಮ ನೀಡಿ, ರಂಗಭೂಮಿಯ ಸರ್ವತೋಮುಖ ಅಭಿವೃದ್ಧಿಗೆ ದುಡಿಯುತ್ತಿದೆ.

  • Karnataka Nataka Academy
    ಅಕಾಡೆಮಿ ಧ್ಯೇಯೋದ್ದೇಶಗಳು
    ನಾಟಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವುದು. ಅಕಾಡೆಮಿಯ ನಾಟಕ ಬೆಳವಣಿಗೆಗಾಗಿ ಬೇರೆ ಕಡೆಗಳಲ್ಲಿರುವ ಇದೇ ರೀತಿಯ ಅಕಾಡೆಮಿಗಳೊಂದಿಗೆ ಮತ್ತು..
  • Karnataka Nataka Academy
    ಪ್ರಶಸ್ತಿ, ಗೌರವ
    ಕರ್ನಾಟಕದ ನಾಟಕ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು ಡಾ: ಗುಬ್ಬಿ ವೀರಣ್ಣನವರದು. ರಂಗಭೂಮಿ ಮನೆ ಮಾತಾಗಿದ್ದ ಮಹನೀಯರ ಸ್ಮರಣಾರ್ಥ ರಂಗಭೂಮಿಗೆ ಶ್ರಮಿಸಿದ ಶ್ರೇಷ್ಠ ನಾಟಕಕಾರರನ್ನು ಗುರುತಿಸಿ ಆ ಕ್ಷೇತ್ರದ ಅತ್ಯುನ್ನತ
ವೀಡಿಯೊಗಳು
ನಮ್ಮ ಪುಸ್ತಕಗಳು
ನಮ್ಮ ಚಿತ್ರ ಸಂಪುಟ